Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಲು ಮುಂದಾದ ವ್ಯಕ್ತಿಗೆ ಆಕೆಯ ಸಂಬಂಧಿ ಮಾಡಿದ್ದೇನು ಗೊತ್ತಾ?

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಲು ಮುಂದಾದ ವ್ಯಕ್ತಿಗೆ ಆಕೆಯ ಸಂಬಂಧಿ ಮಾಡಿದ್ದೇನು ಗೊತ್ತಾ?
ಧಾರವಾಡ , ಸೋಮವಾರ, 30 ಡಿಸೆಂಬರ್ 2019 (10:06 IST)
ಧಾರವಾಡ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಮುಂದಾದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಆಕೆಯ ಸಂಬಂಧಿಯೊಬ್ಬ ಆತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಧಾರವಾಡದ ನವಲಗುಂದ ಪಟ್ಟಣದಲ್ಲಿ ನಡೆದಿದೆ.



ಫಕ್ರುದ್ದೀನ್ ನದಾಫ್ (56) ಕೊಲೆಯಾದ ವ್ಯಕ್ತಿ. ಈತ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಸಂತ್ರಸ್ತ ಬಾಲಕಿಯ ಸಂಬಂಧಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಈ ಘಟನೆಯಲ್ಲಿ ವ್ಯಕ್ತಿ ಸಾವನಪ್ಪಿದ್ದು, ಕೊಲೆ ಮಾಡಿದ ಆರೋಪಿಯನ್ನು ನವಲಗುಂದ ಪೊಲೀಸರು ಬಂಧಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ