Webdunia - Bharat's app for daily news and videos

Install App

ಲವ್ ಬ್ರೇಕ್ ಅಪ್ ಆಗಿದ್ದಕ್ಕೆ ಪಾಗಲ್ ಪ್ರೇಮಿ ತನ್ನ ಪ್ರೇಯಸಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಅಕ್ಟೋಬರ್ 2018 (07:17 IST)
ಬೆಂಗಳೂರು : ಲವ್ ಬ್ರೇಕ್ ಅಪ್ ಆಗಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರು ಹೊರ ವಲಯದ  ಆನೇಕಲ್‍ನಲ್ಲಿ ನಡೆದಿದೆ.


ಬೆಳ್ಳಂದೂರು ನಿವಾಸಿ ಗಿರೀಶ್ ಕೃತ್ಯ ಎಸಗಿದ ಪಾಗಲ್ ಪ್ರೇಮಿ. ಈತ ತನ್ನ ಪ್ರೇಯಸಿಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆಕೆಯ ಮನೆಗೆ ನುಗ್ಗಿ ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಆಗ ಆಕೆ ಕಿರುಚಾಡಿದಾಗ ಪಕ್ಕದ ಮನೆಯವರು ಬಂದ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ.


ಈ ವಿಚಾರ ಪೊಲೀಸರಿಗೆ ತಿಳಿಸಿದ ನೆರೆಯವರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪಾಗಲ್ ಪ್ರೇಮಿ ಗಿರೀಶ್ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments