Daily Horoscope
✕

ಲೈಂಗಿಕ ದೌರ್ಜನ್ಯ ಬಗ್ಗೆ ರಮ್ಯಾ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 4 ಜುಲೈ 2018 (15:02 IST)
ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿರಾಗ್ ಪಟ್ನಾಯಕ್ ಎಂಬ ವ್ಯಕ್ತಿ ಮಾಜಿ ಮಹಿಳಾ ಸಿಬ್ಬಂದಿಯೊಬ್ಬರ  ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ.
ಈ ಬಗ್ಗೆ ಎಫ್.ಐ.ಆರ್. ಕೂಡ ದಾಖಲಾಗಿದ್ದು, ತಮಗಾಗುತ್ತಿರುವ ನೋವಿನ ಬಗ್ಗೆ ಮುಖ್ಯಸ್ಥೆ ರಮ್ಯಾ ಅವರಿಗೂ ದೂರು ನೀಡಿದ್ದರೂ ಕೂಡ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆ ಮಹಿಳಾ ಸಿಬ್ಬಂದಿ  ದೂರಿದ್ದಾರೆ.
 
ಆದರೆ ಇದೀಗ ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೊದಲು ಈ ವಿಷಯ ನನ್ನ ಗಮನಕ್ಕೆ ಬಂದಿರಲಿಲ್ಲ. ಚಿರಾಗ್ ಅಂತಹ ವ್ಯಕ್ತಿಯಲ್ಲ. ಈ ವಿಷಯದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ತಂಡದ ಬಗೆಗಿನ ಆರೋಪದ ಬಗ್ಗೆ ಗೊತ್ತಾಗಿದೆ. ಆದರೆ ಸಮಿತಿಗೆ ಮೌಖಿಕವಾಗಿ, ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ದೂರು ಬಂದಿಲ್ಲ. 
 
ನಾವು ದೂರು ನೀಡಿರುವವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ವಿಷಯ ಏನು ಎಂಬುದನ್ನು ವಿವರವಾಗಿ ತಿಳಿದುಕೊಳ್ಳುತ್ತೇವೆ. ನಮ್ಮ ಬಳಿ ಕೆಲಸ ಮಾಡುವವರನ್ನು ಬೆಂಬಲಿಸುತ್ತೇವೆ. ಇದರ ಜೊತೆ ಲೈಂಗಿಕ ಕಿರುಕುಳದ ಕೇಸ್ ಪರಿಶೀಲನೆ ಮಾಡುತ್ತೇವೆ, ದೂರು ಕೊಟ್ಟ ಯುವತಿ ಅನಾರೋಗ್ಯದ ಕಾರಣ ನೀಡಿದ್ದರು, ಆದರೆ ಈ ವಿಷಯ ಅಂತಾ ನನಗೆ ಗೊತ್ತಿರಲಿಲ್ಲ ಎಂದು ಪತ್ರದ ಮೂಲಕ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ