ಬೆಂಗಳೂರು: ಶ್ವಾಸಕೋಸದ ಸೋಂಕಿನಿಂದ ಬಳಲುತ್ತಿರುವ ಪತ್ನಿ ಪಾರ್ವತಿಯನ್ನು ನೋಡಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದರು.
ಪಾರ್ವತಿ ಅವರಿಗೆ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪತ್ನಿಯ ಆರೋಗ್ಯವನ್ನು ವಿಚಾರಿಸುವ ಸಲುವಾಗಿ ದೆಹಲಿಯಿಂದ ಎಲ್ಲ ಕೆಲಸವನ್ನು ಬಿಟ್ಟು ಬಂದ ಸಿದ್ದರಾಮಯ್ಯ, ಪಾರ್ವತಿ ಅವರನ್ನು ಭೇಟಿಯಾಗಿ, ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯರ ಜತೆ ಚರ್ಚಿಸಿದ್ದಾರೆ.
ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಆಕೆ ಶ್ವಾಸಕೋಸದ ಸೋಂಕಿನಿಂದ ಬಳಲುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಯಾವುದೇ ತೊಂದರೆಯಿಲ್ಲ. ಇನ್ನೂ ಮೂರು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಬಹುದು ಎಂದರು.