Select Your Language

Notifications

webdunia
webdunia
webdunia
webdunia

ಖರ್ಗೆ ಸಿಎಂ ಆಗಬಹುದು ಎಂಬ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಖರ್ಗೆ ಸಿಎಂ ಆಗಬಹುದು ಎಂಬ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?
ಬೆಂಗಳೂರು , ಗುರುವಾರ, 16 ಮೇ 2019 (12:25 IST)
ಬೆಂಗಳೂರು : ಖರ್ಗೆ ಸಿಎಂ ಆಗಬಹುದು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಟ್ವೀಟ್ ಮಾಡುವುದರ  ಮೂಲಕ ಟಾಂಗ್ ನೀಡಿದ್ದಾರೆ.




ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದ ವೇಳೆ ಹೈಕಮಾಂಡ್ ರಾಜಕೀಯ ನಿರ್ಧಾರಗಳಿಂದ ಖರ್ಗೆ ಮುಖ್ಯಮಂತ್ರಿ ಆಗಲಿಲ್ಲ. ಆದರೆ ಖರ್ಗೆ ಅವರು ಅವರು ಸಿಎಂ ಆಗಲಿಲ್ಲ ಎಂಬ ನೋವು ನಮಗಿದೆ ಎಂದು ಹೇಳಿದ್ದರು.


ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ ಅದಕ್ಕಿಂತಲೂ ಉನ್ನತಸ್ಥಾನದ ಅರ್ಹತೆ ಇದೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಸಿಎಂ ಆಗೋ ಅರ್ಹತೆ ಇರುವವರು ಬಹಳ ಜನ ಇದ್ದಾರೆ. ಅವರಲ್ಲಿ ಸಚಿವ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿಬರಬೇಕು ಎಂದು ಸಿಎಂ ಹೇಳಿಕೆಗೆ ಟಾಂಗ್ ನೀಡುವಂತೆ ಟ್ವೀಟ್ ಮಾಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತೆಯನ್ನು ಮನೆಗೆ ಬರದಂತೆ ಮಾಡಲು ಅಳಿಯ ಮಾಡಿದ ಇಂತಹ ಖತರ್ನಾಕ್ ಪ್ಲಾನ್