Publish Date: Mon, 28 Sep 2020 (21:30 IST)
Updated Date: Mon, 28 Sep 2020 (21:36 IST)
ಗಣಿನಾಡು ಬಳ್ಳಾರಿ ಜಿಲ್ಲೆ ಎಂದಿನಂತೆ ಇರಲಿಲ್ಲ.
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ.
ಅಂಗಡಿ ಮಳಿಗೆಗಳು ಮುಚ್ಚಿದ್ದವು. ಸಾರಿಗೆ ಸಂಸ್ಥೆಗಳ ಬಸ್ ಬಿಟ್ಟರೆ ಉಳಿದಂತೆ ಎಲ್ಲಾ ರೀತಿಯ ವಾಹನಗಳ ಓಡಾಟ ಇತ್ತು. ಖಾಸಗಿ ಮತ್ತು ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಸಂಘಟನೆಗಳ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲ ಸಮಯ ರಸ್ತೆ ತಡೆ ನಡೆಸಲಾಯಿತು.
ಇದನ್ನು ಬಿಟ್ಟರೆ ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಬಂದ್ ಶಾಂತಿಯುತವಾಗಿ ನಡೆಯಿತು.
(ಚಿತ್ರ ಕೃಪೆ : ಫೇಸ್ ಬುಕ್ )