Webdunia - Bharat's app for daily news and videos

Install App

ಹಾಡಹಗಲೇ ಯುವಕ ಆ ಯುವತಿಗೆ ಏನ್ ಮಾಡ್ದಾ ಗೊತ್ತಾ?

Webdunia
ಗುರುವಾರ, 24 ಆಗಸ್ಟ್ 2023 (16:45 IST)
ಮಂಗಳೂರು : ಹಾಡಹಗಲೇ ಯುವಕನೋರ್ವ ಬೈಕ್ನಲ್ಲಿ ಬಂದು ಯುವತಿಯ ಕತ್ತು ಸೀಳಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
 
ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ವಿಟ್ಲದ ಅಳಿಕೆ ನಿವಾಸಿ ಗೌರಿ (25) ಮೃತಪಟ್ಟಿದ್ದಾರೆ. ಆರೋಪಿ ಪದ್ಮರಾಜ್ (30) ವಿಟ್ಲ ನಿವಾಸಿಯಾಗಿದ್ದು, ಕಳೆದ ಕೆಲ ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.

ಗುರುವಾರ ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಯುವತಿ ಮಹಿಳಾ ಠಾಣೆಗೆ ದೂರು ನೀಡಲೆಂದು ಬರುತ್ತಿದ್ದ ಸಂದರ್ಭ ಆರೋಪಿ ಪದ್ಮರಾಜ್ ಬೈಕ್ನಲ್ಲಿ ಬಂದು ಯುವತಿಯನ್ನು ತಡೆದು ಮೂರರಿಂದ ನಾಲ್ಕು ಬಾರಿ ಆಕೆಯ ಕುತ್ತಿಗೆಗೆ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ.

ಚಾಕು ಇರಿತಕ್ಕೊಳಗಾದ ಯುವತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಕೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದು, ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಕುರಿತು ಪುತ್ತೂರು ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments