Select Your Language

Notifications

webdunia
webdunia
webdunia
webdunia

ಮತಕ್ಕಾಗಿ ಉಮೇಶ್ ಜಾಧವ್ ವೇದಿಕೆ ಮೇಲೆ ಮಾಡಿದ್ದೇನು ಗೊತ್ತಾ?

ಕಲಬುರಗಿ
ಕಲಬುರಗಿ , ಸೋಮವಾರ, 22 ಏಪ್ರಿಲ್ 2019 (08:42 IST)
ಕಲಬುರಗಿ : ನಿಮಗೆ ಕೈ ಜೋಡಿಸಿ ವಿನಂತಿ ಮಾಡುತ್ತೇನೆ ನನಗೆ ಒಂದು ಅವಕಾಶ ಕೊಡಿ ಎಂದು ಮತಕ್ಕಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ಜಾಧವ್ ವೇದಿಕೆ ಮೇಲೆ ಮತದಾರರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ.


ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಹಿಂದೆ ದೊಡ್ಡ ಶಕ್ತಿಗಳಿವೆ. ಹೀಗಾಗಿ ಕಲಬುರಗಿ ಜಿಲ್ಲೆಯ ಜನ ನನ್ನ ಮತ ಹಾಕಿ ಗೆಲ್ಲಿಸಬೇಕು. ರಾಜ್ಯ ಸರ್ಕಾರವು ಕಾಂಗ್ರೆಸ್ ಸಂಸದೀಯ ನಾಯಕ, ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರ ಪರ ಕೆಲಸ ಮಾಡುತ್ತಿದೆ. ಯಾರಿಗೂ ನೀವು ಹೆದರದೇ ನನಗೆ ಮತ ಹಾಕಿ. ಮುಂದಿನ 5 ವರ್ಷಗಳ ಕಾಲ ನಿಮ್ಮ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದು ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.


ಸೋಲಿಲ್ಲದ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರು ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗಾಗಿ ಏನು ಮಾಡಿದ್ದಾರೆ? ಕಲಬುರಗಿಗೆ ಮೋದಿ ಕೊಡುಗೆ ಏನು ಅಂತ ಕೇಳುತ್ತಾರೆ. ಆದರೆ ಗುರುಮಠಕಲ್ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಏನು ಎಂದು ಅವರು  ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾದ ಮ್ಯಾಕ್ ಡೋನಲ್ಡ್ ರೆಸ್ಟೋರೆಂಟ್ ನಲ್ಲಿ ನಡೆದಿದೆ ಇಂತಹದೊಂದು ಘಟನೆ