Publish Date: Sun, 23 Sep 2018 (20:28 IST)
Updated Date: Sun, 23 Sep 2018 (20:30 IST)
ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು, ಗೊಂದಲಗಳು ಮುಂದುವರೆದಿರುವ ಬೆನ್ನಲ್ಲೇ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಪಕ್ಷದ ಅತೃಪ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಪಕ್ಷದ ಅತೃಪ್ತರ ಬ್ಲಾಕಮೇಲ್ ತಂತ್ರಕ್ಕೆ ಮಣಿಯುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘನೆ ಮಾಡುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಾರ್ಯಾಲಯ ಮುಂಭಾಗದಲ್ಲಿ ಮಹಿಳಾ ಕಾಂಗ್ರೆಸ್ ನ ನೂತನ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಅತೃಪ್ತ ಶಾಸಕರು ಅಧಿಕಾರಕ್ಕಾಗಿ ನಡೆಸಿರುವ ಬ್ಲಾಕಮೇಲ್ ತಂತ್ರಗಾರಿಕೆ ವಿರುದ್ಧ ಕಿಡಿಕಾರಿದರು. ನಮ್ಮ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ ಎಂದೂ ಹೇಳಿದರು.