Publish Date: Mon, 29 Jun 2020 (10:04 IST)
Updated Date: Mon, 29 Jun 2020 (10:33 IST)
ಬೆಂಗಳೂರು: ಜುಲೈ ಅಂತ್ಯದೊಳಗೆ ಪಿಯುಸಿ ಫಲಿತಾಂಶ, ಆಗಸ್ಟ್ ನಲ್ಲಿ sslc ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ನಿರ್ಧರಿಸಿಲ್ಲ. ಹಾಗೇ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಿಸದಂತೆ ಆದೇಶವನ್ನು ನೀಡಲಾಗಿದೆ. ಕೇಂದ್ರದಿಂದ ಆನ್ ಲೈನ್ ಕ್ಲಾಸ್ ಗೆ ಮಾರ್ಗಸೂಚಿಯನ್ನು ನೀಡಲಾಗುತ್ತದೆ. ಮಕ್ಕಳಿಗೆ ತೊಂದರೆಯಾಗದಂತೆ ಆನ್ ಲೈನ್ ಕ್ಲಾಸ್ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.