Webdunia - Bharat's app for daily news and videos

Install App

ವಲಸಿಗರಲ್ಲಿ ಕೊರೊನಾ ನೆಗಟಿವ್ ಬಂದರೆ ಎಲ್ಲಿ ಹೋಗ್ಬೇಕು?

Webdunia
ಗುರುವಾರ, 21 ಮೇ 2020 (20:50 IST)
ಮಹಾರಾಷ್ಟ್ರ ಮತ್ತಿತರ ಕಡೆಯಿಂದ ಆಗಮಿಸಿ ವಿವಿಧೆಡೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವ ವಲಸಿಗರ ಪೈಕಿ ಕೋವಿಡ್-19 ನೆಗೆಟಿವ್ ಬಂದಿರುವ ಕಾರ್ಮಿಕರನ್ನು ಅವರವರ ಮನೆಗಳಿಗೆ ಕಳುಹಿಸಿ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ.

ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್  ಅವರು ಈ ವಿಷಯ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಪಂಕಜ್ ಕುಮಾರ್ ಪಾಂಡೆ ಅವರು ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಜಾಧವ್ ಅವರು ತಿಳಿಸಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವವರಲ್ಲಿ ಪಾಸಿಟಿವ್ ಬಂದಿರುವವರಿಗೆ ಇಎಸ್ಐಸಿ ಮತ್ತು ಜಿಮ್ಸ್ ಕೋವಿಡ್- 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗಟಿವ್ ವರದಿ ಬಂದಿರುವವರು ಮನೆಗೆ ತೆರಳಬಹುದು. ಆದರೆ, ಆರೋಗ್ಯ ಇಲಾಖೆ ಸೂಚಿಸಿರುವಷ್ಟು ದಿನಗಳು ಕಡ್ಡಾಯವಾಗಿ ಹೋಂ ಕ್ವಾರಂಟೈನ್ ನಲ್ಲಿ ಇರಬೇಕು. ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ವಲಸಿಗರಿಗೆ ಸಲಹೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments