Publish Date: Sat, 22 Dec 2018 (15:14 IST)
Updated Date: Sat, 22 Dec 2018 (15:16 IST)
10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೈಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಅಪರಿಚಿತ ಯುವಕನಿಂದ 10ನೇ ತರಗತಿ ವಿದ್ಯಾರ್ಥಿನಿ ಕೈಗೆ ಚಾಕು ಇರಿತವಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿನಿ ಶಾಲೆಗೆ ಹೋಗುವಾಗ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಯುವಕ ನಡೆಸಿದ ದಾಳಿಯಿಂದಾಗಿ, ವಿದ್ಯಾರ್ಥಿನಿಯ ಎರಡು ಕೈಗಳಿಗೆ ಗಾಯಗಳಾಗಿವೆ.
ಗಾಯಾಳು ವಿದ್ಯಾರ್ಥಿನಿಯನ್ನು ಬನಹಟ್ಟಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಲಹಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಲೆ ಈ ಘಟನೆ ನಡೆದಿದೆ. ರೂಪಾ ಶಿವಲಿಂಗ ಚಾಂಬರ್ (16) ಚಾಕು ಇರಿತಕ್ಕೆ ಒಳಗಾದ ವಿದ್ಯಾರ್ಥಿನಿಯಾಗಿದ್ದಾಳೆ. ಆಸ್ಪತ್ರೆಗೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.