Select Your Language

Notifications

webdunia
webdunia
webdunia
webdunia

ಬಿಬಿಎಂಪಿ ನೂತನ ಮೇಯರ್, ಉಪಮೇಯರ್ ಯಾರು ಗೊತ್ತಾ?

ಬಿಬಿಎಂಪಿ ನೂತನ ಮೇಯರ್, ಉಪಮೇಯರ್ ಯಾರು ಗೊತ್ತಾ?
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2016 (16:42 IST)
ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಮೇಯರ್ ರೇಸ್‌ನಲ್ಲಿ ಪದ್ಮಾವತಿ, ಲಾವಣ್ಯ ಹಾಗೂ ಸೌಮ್ಯ ಶಿವಕುಮಾರ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ.
 
ಸೆಪ್ಟೆಂಬರ್ 28 ರಂದು ಬಿಬಿಎಂಪಿಯಲ್ಲಿ  ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲ್ಲಿದ್ದು, ಮೇಯರ್ ರೇಸ್‌ನಲ್ಲಿ ಮೂರು ಮಹಿಳಾ ಮಣಿಯರ ಹೆಸರು ಮುಂಚೂಣಿಯಲ್ಲಿದೆ. ಮೇಯರ್ ಯಾರಾಗಬೇಕು ಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂತಿಮಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.  
 
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸಿಕೊಂಡು ಹೋಗುವುದರ ಕುರಿತು ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದು, ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಖಚಿತ ಎಂದು ತಿಳಿದು ಬಂದಿದೆ.  
 
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಿಬಿಎಂಪಿ ಮೇಯರ್ ಆಯ್ಕೆ ಪಟ್ಟಿಯನ್ನು ಇಂದು ಅಥವಾ ನಳೆ ಅಂತಿಮಗೊಳಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕೆ: ಪದ್ಮನಾಭ ರೆಡ್ಡಿ