ತಗ್ಗಿ ಬಗ್ಗಿ ನಡೆಯಲು ಬೆಂಗಳೂರನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ: ಡಿಕೆಶಿಗೆ ಕೌಂಟರ್‌ ಕೊಟ್ಟ ಆರ್‌ ಅಶೋಕ್

Sampriya
ಗುರುವಾರ, 7 ನವೆಂಬರ್ 2024 (14:07 IST)
ಬೆಂಗಳೂರು: ಅನುದಾನ ಕೇಳಿದ ಸಂಸದ ತೇಜಸ್ವಿ ಸೂರ್ಯಗೆ ನನ್ನ ಜತೆ ತಗ್ಗಿ ಬಗ್ಗಿ ಇರಬೇಕೆಂದು ವಾರ್ನ್‌ ಮಾಡಿದ ಡಿಕೆ ಶಿವಕುಮಾರ್ ನಡೆಗೆ ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂದ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು - ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು.

ಸನ್ಮಾನ್ಯ ಡಿಕೆ ಶಿವಕುಮಾರ್‌ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ.

ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ.

ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments