Publish Date: Fri, 25 Oct 2019 (16:40 IST)
Updated Date: Fri, 25 Oct 2019 (16:42 IST)
ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಮಹಿಳೆಯೊಬ್ಬಳಿಗೆ ಮಾಡಬಾರದ ಕೆಲಸ ಮಾಡಲಾಗಿದೆ.
ಬ್ಯಾಂಕಿನ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ ಅಕೌಂಟಿನಲ್ಲಿದ್ದ 12.196 ರೂ. ಹಣವನ್ನು ವಂಚನೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ನಗರದ ಕೇಶ್ವಾಪುರದ ಮಹದೇವ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ನಿರ್ಮಲಾ ಯೋಗಾನಂದ ದಾಸರ ಎಂಬುವರೇ ಮೋಸ ಹೋಗಿ ಹಣ ಕಳೆದುಕೊಂಡವರು ಆಗಿದ್ದಾರೆ. ಇವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ತಾನು ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿದ್ದಾನೆ.
ನಂತರ ಬ್ಯಾಂಕ್ ಖಾತೆಯ ವಿವರ ಪಡೆದು ಖಾತೆಯಲ್ಲಿದ್ದ ಹಣವನ್ನು ಆನಲೈನ್ ಮೂಲಕ ವರ್ಗಾವಣೆ ಮಾಡಿಕೊಳ್ಳುವ ಮೂಲಕ ವಂಚನೆ ಮಾಡಿದ್ದಾನೆ. ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.