Publish Date: Mon, 02 Apr 2018 (08:47 IST)
Updated Date: Mon, 02 Apr 2018 (08:52 IST)
ಬೆಂಗಳೂರು : ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರ ಇರುವ ಕುಕ್ಕರ್ ಗಳ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಟ್ವಿಟ್ಟರ್ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವ್ಯಂಗ್ಯ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೂಡ ತಮ್ಮ ಟ್ವಿಟ್ಟರ್ ನಲ್ಲಿ,’ ಕುಕ್ಕರ್ ಬೇಕಾ ಕುಕ್ಕರ್, ನಾನು ಲಕ್ಷ್ಮೀ ಹೆಬ್ಬಾಳ್ಕರ್, ಸುಮ್ನೆ ಬಿಡೋಲ್ಲ ವೋಟ್ ಕೊಡದೇ ಮಾಡಿದ್ರೆ ಮಕ್ಕರ್! ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕುಕ್ಕರ್ ಗಳನ್ನು ಸಾಗಿಸುತ್ತಿದ್ದ ಲಾರಿಯ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ಫೋಟೋ ಸೇರಿಸಿ ಎಡಿಟ್ ಮಾಡಿ,’ ಕುಕ್ಕರ್ ಸಿಗಲಿಲ್ಲ ಅಂತಾ ಬೇಜಾರಾಗ್ಬೇಡಿ, ನಾನೇ ಕುಕ್ ಮಾಡಿ ಬಾಕ್ಸ್ ನಲ್ಲಿ ಹಾಕಿ ಅಮೇಜಾನ್ ನಲ್ಲಿ ಡೆಲಿವರಿ ಮಾಡ್ತೇನೆ’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳುತ್ತಿರುವಾ ಹಾಗೆ ತಮ್ಮ ಟ್ವೀಟರ್ ನಲ್ಲಿ ಬರೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ