ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

Sampriya
ಭಾನುವಾರ, 7 ಡಿಸೆಂಬರ್ 2025 (17:39 IST)
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಏಕವಚನ ಬಳಕೆ ಮಾಡಿ ಮಾತನಾಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ ಆರ್‌ ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ. 

ಸಿದ್ದರಾಮಯ್ಯ ನಡೆ ಬಗ್ಗೆ ಪ್ರಶ್ನಿಸಿ ಆರ್‌ ಅಶೋಕ್ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಪ್ರಶ್ನೆ ಮಾಡಿದ್ದಾರೆ. 

ನಮ್ಮ ದೇಶದ ಗೌರವಾನ್ವಿತ ಹಣಕಾಸು ಸಚಿವೆ ಅವರನ್ನು ಹೀಗೆ ಏಕವಚನದಲ್ಲಿ, ಅಗೌರವದಿಂದ ಸಂಬೋಧನೆ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ? ಇದು ಮನುವಾದನಾ? ಅಥವಾ ಸಿದ್ದರಾಮಯ್ಯವಾದನಾ? ಅಥವಾ ರಾಹುಲ್ ಗಾಂಧಿವಾದನಾ?

ಇದನ್ನ ಪ್ರಶ್ನೆ ಮಾಡಿದರೆ, ತಮ್ಮದು ಗ್ರಾಮೀಣ ಭಾಷೆ, ತಾವು ಹಳ್ಳಿಯಿಂದ ಬಂದವರು ಎಂಬ ಬುರುಡೆ ಸಮಜಾಯಿಷಿ ಕೊಡಬೇಡಿ. 

ಇಂದಿರಾ ಗಾಂಧಿ ಅವರನ್ನ ಅಥವಾ ಸೋನಿಯಾ ಗಾಂಧಿ ಅವರನ್ನ ಅಥವಾ ಪ್ರಿಯಾಂಕಾ ಗಾಂಧಿ ಅವರನ್ನ ಇದೇ ಭಾಷೆಯಲ್ಲಿ, ಇದೇ ಧಾಟಿಯಲ್ಲಿ "ಎಂಥವಳೋ ಅವಳು?" ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ?

ಮಹಿಳೆಯರನ್ನ ತುಚ್ಛವಾಗಿ ಕಾಣುವ ಕಾಂಗ್ರೆಸ್ ಪಕ್ಷದ ಈ ಕೀಳು ಮನಸ್ಥಿತಿಯನ್ನ ಕರ್ನಾಟಕದ ಸ್ವಾಭಿಮಾನಿ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments