ತಾಯಿಯ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ವೈದ್ಯರ ಮೇಲೆ ಗೂಂಡಾವರ್ತನೆ ತೋರಿದ ಘಟನೆ ಶಿರಸಿಯಲ್ಲಿ ನಡೆದಿದೆ.
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳಿಗೆ ವೈದ್ಯರು ಪರಿಶೀಲಿಸುತ್ತಿದ್ದರು. ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಆದರೆ, ಈ ಕೂರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ