ರ್ನಾಟಕದ್ಯಾಂತ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ನಾಲ್ಕು ತಿಂಗಳಿಂದ ವೇತನವನ್ನು ನೀಡದೆ ಕರ್ನಾಟಕದ ಸರಕಾರ ಸತಾಯಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ವೇತನ ನೀಡದೆ ವೈದ್ಯರಿಗೆ ಹಿಂಸೆ ನೀಡುತ್ತಿರುವ ಸರ್ಕಾರದ ಈ ನಡೆ ಅಮಾನವೀಯ ಎಂದು ಆಮ್ ಆದ್ಮಿ ಪಾರ್ಟಿಯ ವೈದ್ಯಕೀಯ ಘಟಕದ ಅಧ್ಯಕ್ಷ ಮತ್ತು ವೈದ್ಯ ಡಾ. ವಿಶ್ವನಾಥ್ ಟೀಕಿಸಿದರು.
ಕರ್ನಾಟಕ ಅಸೋಸಿಯೇಷನ್ ಫಾರ್ ರೆಸಿಡೆಂಟ್ ಡಾಕ್ಟರ್ಸ್ ಈ ಕುರಿತು ಒಂದು ಪಟ್ಟಿಯನ್ನು ನೀಡಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 16 ಆಸ್ಪತ್ರೆಗಳು ಮತ್ತು ಆರೋಗ್ಯ ಇಲಾಖೆ ಅಡಿಯಲ್ಲಿ ಬರುವ 53 ಆಸ್ಪತ್ರೆಗಳ ವೈದ್ಯರಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಇವರು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಒಂದು ವಾರದ ಒಳಗೆ ವೇತನವನ್ನು ನೀಡುವುದಾಗಿ ಹೇಳಿಕೆ ನೀಡಿದ್ದರೂ ಇನ್ನೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು …