Publish Date: Thu, 16 Nov 2017 (11:51 IST)
Updated Date: Thu, 16 Nov 2017 (11:54 IST)
ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಅಧಿವೇಶನದಲ್ಲಿ ಕೆಪಿಎಂಇ ಮಸೂದೆ ಮಂಡಿಸಿಲ್ಲ. ಸರ್ವಪಕ್ಷಗಳೊಂದಿಗೆ ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರವಷ್ಟೆ ಮಂಡನೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಖಾಸಗಿ ವೈದ್ಯರೊಂದಿಗೆ ನಡೆದ ಚರ್ಚೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನಿಮಗೆ ಮಾಹಿತಿ ನೀಡದೆ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಿದ್ದೇನೆ.
ಕೇವಲ ಉಹಾಪೋಹ ವರದಿಗಳ ಆಧಾರದ ಮೇಲೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತದೆ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.