Select Your Language

Notifications

webdunia
webdunia
webdunia
webdunia

ನಟ ರಮೇಶ್ ಅರವಿಂದ್ ವಿ ರವಿಚಂದ್ರನ್ ಡಾಕ್ಟರೇಟ್ ಘೋಷಣೆ

webdunia
ಬೆಂಗಳೂರು , ಮಂಗಳವಾರ, 13 ಸೆಪ್ಟಂಬರ್ 2022 (16:22 IST)
ಖ್ಯಾತ ನಟ ರಮೇಶ್ ಅರವಿಂದ್, ವಿ.ರವಿಚಂದನ್ ಸೇರಿ ಮೂವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
 
ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‍ಗೆ ಆಯ್ಕೆ ಮಾಡಲಾಗಿದೆ.
 
ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದನ್ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ. ರಾಮಚಂದ್ರೆಗೌಡ ತಿಳಿಸಿದ್ದಾರೆ.
 
ನಾಳೆ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಅಧ್ಯಕ್ಷತೆ ವಹಿಸಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ ಎಂದು ಹೇಳಿದರು.
 
ಆಂಧ್ರ ಪ್ರದೇಶದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜನರಿಗೆ ಎಲಿಜಬೆತ್ ನಿಂದ ಸಿಕ್ರೇಟ್ ಲೆಟರ್!