ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ.?

Webdunia
ಬುಧವಾರ, 18 ಮೇ 2022 (19:43 IST)
ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್ ನಿಂದ ಆಝಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
"ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?" ಎಂದು ಟ್ವೀಟ್ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 
"ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್ ಸಿಗದೆ ಕೋವಿಡ್ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?" ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
"ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.?" ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ ಅಸಾಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments