Publish Date: Mon, 20 Jul 2020 (21:26 IST)
Updated Date: Mon, 20 Jul 2020 (21:28 IST)
ಶವ ಸಂಸ್ಕಾರ ಮಾಡುವಾಗ ಅಡ್ಡಿಪಡಿಸಲೇಬಾರದು. ಹೀಗಂತ ಡಿಸಿ ಹೇಳಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಮಾಡದೆ ಮಾನವೀಯತೆಯಿಂದ ಅಂತಿಮ ವಿಧಿ-ವಿಧಾನಗಳನ್ನು ನೆರೆವೇರಿಸಲು ಸಹಕರಿಸುವಂತೆ ರಾಮನಗರ ಜಿಲ್ಲೆಯ ಜನರಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮನವಿ ಮಾಡಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಯಾವುದೇ ಸಮುದಾಯದವರ ಶವಸಂಸ್ಕಾರ ಮಾಡುವುದನ್ನು ತಡೆಯಬಾರದು. ಅಂತಿಮ ವಿಧಿವಿಧಾನಗಳನ್ನು ಕುಟುಂಬಸ್ಥರ ಸಮ್ಮುಖದಲ್ಲೆ ಮತ್ತು ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗಿರುವ ಅಧಿಕಾರಿಗಳ ಸಹಯೋಗದೊಂದಿಗೆ ನೆರವೇರಿಸಬೇಕು.
ಮೃತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಿಲ್ಲೆಯ ಜನತೆ ನೆರವಾಗುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.