Daily Horoscope

Select Your Language

Notifications

webdunia
webdunia
webdunia
webdunia

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

Suresh Kumar
Photo Credit X
ಬೆಂಗಳೂರು: ಅಡ್ಡಮತದಾನದ ಬಗ್ಗೆ ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ಕರೆಯಲು ನಿರ್ಧರಿಸಿರುವ ಬಿವೈ ವಿಜಯೇಂದ್ರ ಹೇಳಿಕೆಯಿಂದ ದಿಗ್ಭ್ರಮೆಯಾಗಿದೆ ಎಂದು ಬಿಜೆಪಿ ನಾಯಕ ಎಸ್‌ ಸುರೇಶ್ ಕುಮಾರ್ ಹೇಳಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್. ಸುರೇಶ್ ಕುಮಾರ್ ಅವರು, ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ. 

ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ ತಾಯಿಯ ನಂತರ ನನಗಿರುವ ನಿಜವಾದ ಬಂಧು ಎಂದರೆ ಮಂಜುನಾಥ ಸ್ವಾಮಿ. ರಾಜಕಾರಣದಲ್ಲಿ ನಡೆದುಬಿಟ್ಟಿರುವ ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ದಯವಿಟ್ಟು ಬೇಡ ಎಂದಿದ್ದಾರೆ.

ಈ ಅಪಚಾರ ಮಾಡಿರುವವರು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಪಾಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇಡೀ ನಾಡೇ ನಂಬಿಕೆಯನ್ನಿಟ್ಟಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಸ್ವಾಮಿ ಸನ್ನಿಧಾನದಲ್ಲಿ  ಒಂದೊಮ್ಮೆ ಅಡ್ಡ ಮತದಾನ ಮಾಡಿದ ವೀರರು ಆಣೆ - ಪ್ರಮಾಣ ಮಾಡಿ ತಾವು ಉಳಿದುಕೊಳ್ಳಲು ತಮ್ಮ ನೈತಿಕ ದಿವಾಳಿತನ ತೋರಿಸಿದರೆ, ಅದರಿಂದ ಅಪಚಾರದ ಪ್ರಮಾಣ ಹೆಚ್ಚಾಗುತ್ತದಷ್ಟೇ. 

ದಯವಿಟ್ಟು ಸ್ವಾಮಿ ಮಂಜುನಾಥನ ಶ್ರೇಷ್ಠತೆಯನ್ನು ಈ ರೀತಿ ಓರೆ ಹಚ್ಚುವುದು ಯಾವುದೇ ಕಾರಣಕ್ಕೂ ಬೇಡ ಎಂದು ತಿಳಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ