Select Your Language

Notifications

webdunia
webdunia
webdunia
webdunia

ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ

ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ
bangalore , ಸೋಮವಾರ, 20 ಫೆಬ್ರವರಿ 2023 (15:05 IST)
ಇಬ್ಬರು ಮಹಿಳಾ ಅಧಿಕಾರಿಗಳ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇವರ ಇಬ್ಬರ ಜಗಳದಲ್ಲಿ ದಿವಂಗತ ಐಎಎಸ್​​ ಅಧಿಕಾರಿ ಡಿ.ಕೆ ರವಿ ಅವರ ಹೆಸರು ಎಳೆದು ತಂದಿದ್ದು, ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಗೌರಮ್ಮ, ನಿಮ್ಮ ಗಲಾಟೆ ವಿಚಾರದಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ ಎಂದು ಹೇಳಿದ್ದಾರೆ. ನನ್ನ ಮಗ ಹೋಗಿ 8 ವರ್ಷವಾಯ್ತು. ಡಿ.ಕೆ.ರವಿಯನ್ನು ನಾನು ಸಾಕಿ ಬೆಳೆಸಿದ್ದೇನೆ. ರವಿ ಜತೆ ಕುಸುಮಾ 5 ವರ್ಷ ಅಷ್ಟೆ ಸಂಸಾರ ಮಾಡಿದ್ದಾಳೆ. ನನ್ನ ಮಗ ಇರುವವರೆಗೂ ಮಾತ್ರ ಆಕೆ ಸೊಸೆ. ಹೀಗಾಗಿ ನೀವ್ಯಾರೂ ನನ್ನ ಮಗನ ಹೆಸರನ್ನು ತರಬೇಡಿ ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿಣಿ ಬಗ್ಗೆ ಮಾತನಾಡೋದಕ್ಕೆ ರೂಪಾ ಯಾರು?