Select Your Language

Notifications

webdunia
webdunia
webdunia
webdunia

ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ : ಅಶೋಕ್

ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ : ಅಶೋಕ್
ಬೆಂಗಳೂರು , ಶನಿವಾರ, 27 ಮೇ 2023 (08:54 IST)
ಬೆಂಗಳೂರು : ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಹೇಳಿದ್ದಾರೆ.
 
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ನನಗೂ ಉಚಿತ, ನಿಮಗೂ ಉಚಿತ ಎಂದು ಹೇಳಿದ್ದರು. ಸಿದ್ದರಾಮಯ್ಯನವರು ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಕರೆಟ್ ಬಿಲ್ ಕಟ್ಟಿದರೆ ಅದು ಮುಖ್ಯಮಂತ್ರಿ ಹುದ್ದೆಗೆ ಮಾಡುವ ಅವಮಾನ. ನಾನೇ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಸಿಎಂ ಅವರೇ ಹೇಳಿದ ಹಿನ್ನೆಲೆಯಲ್ಲಿ ಯಾರೂ ಕರೆಟ್ ಬಿಲ್ ಕಟ್ಟಬಾರದು ಎಂದು ಮನವಿ ಮಾಡಿದರು. 

ಸರ್ಕಾರದ ಬಂದ ಮೊದಲ ಕ್ಯಾಬಿನೆಟ್ನಲ್ಲಿ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ಯಾರೂ 200 ಯೂನಿಟ್ಗೆ ವಿದ್ಯುತ್ ಬಿಲ್ ಕಟ್ಟಬಾರದು ಮತ್ತು ಮಹಿಳೆಯರು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಟಿಕೆಟ್ ತೆಗೆದುಕೊಳ್ಳಬಾರದು ಎಂದು ಜನರಲ್ಲಿ ವಿನಂತಿ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ : ಕಟೀಲ್