Publish Date: Tue, 17 Jan 2023 (08:41 IST)
Updated Date: Tue, 17 Jan 2023 (08:15 IST)
ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಅವರು, ತಮ್ಮ ಇಲಾಖೆಯಲ್ಲಿ ದಂಧೆ ನಡೆಯುತ್ತಿದ್ದರೆ ಸಚಿವರು ಏನು ಮಾಡುತ್ತಿದ್ದರು.
ಅದನ್ನು ಅವರು ಜನರಿಗೆ ತಿಳಿಸಬೇಕು ಅಲ್ಲವೇ? ಸ್ಯಾಂಟ್ರೋ ರವಿ ಬಳಿ ಹಣ ಪಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ತೀನಿ ಎನ್ನುವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರು ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ನಾನ್ಯಾಕೆ ಹೇಳಲಿ. ಈ ಸರ್ಕಾರದಲ್ಲಿ ನಡೆಯುತ್ತಿರುವ ಕಾಸಿಗಾಗಿ ಪೋಸ್ಟಿಂಗ್ ವಿಚಾರ ಬೀದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ.
ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ದಂಧೆಗಳ ಜನರು ಕೂತಲ್ಲಿ, ನಿಂತಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.