Webdunia - Bharat's app for daily news and videos

Install App

ಅದ್ಧೂರಿ ದಸರಾದಿಂದ ಅದ್ಧೂರಿ ಹಗರಣವಾಗದಿರಲಿ: ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ

Sampriya
ಬುಧವಾರ, 18 ಸೆಪ್ಟಂಬರ್ 2024 (15:56 IST)
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ ಕಾಂಗ್ರೆಸ್  ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಶ್ರೀ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ
ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments