Publish Date: Sat, 06 May 2023 (12:30 IST)
Updated Date: Sat, 06 May 2023 (12:19 IST)
ಬೆಂಗಳೂರು : ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ರ್ಯಾಲಿಯಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮೋದಿ ರ್ಯಾಲಿ ರದ್ದು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಭಾನುವಾರ ನೀಟ್ ಪರೀಕ್ಷೆ ಇದ್ದರೂ ಮೋದಿ ರ್ಯಾಲಿ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅಧಿಕಾರ ಮುಖ್ಯ. ಅವರು ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡುತ್ತಾರೆ.
ಜನರ ಬದುಕಿನ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಏನಾದರು ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವುದು ಅವರ ಅಜೆಂಡಾ. ಅವರಿಂದ ಸರಿ-ತಪ್ಪುಗಳನ್ನು ನಿರೀಕ್ಷೆ ಮಾಡಬೇಡಿ. ಈ ರ್ಯಾಲಿ ನಿಲ್ಲಿಸಬೇಕೆಂದು ನಾನು ಪ್ರಧಾನ ಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ ಎಂದು ಕಿಡಿಕಾರಿದರು. ಮಂಡ್ಯದಲ್ಲಿ ಸುಮಲತಾ ಗೆಲ್ಲಿಸಿ ತಪ್ಪು ಮಾಡಿದೆವು ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮಾತಿನಿಂದ ಸತ್ಯ ಹೊರಬಂದಿದೆ.