ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

Sampriya
ಸೋಮವಾರ, 1 ಡಿಸೆಂಬರ್ 2025 (16:15 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. 

ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೊಂದು ಔತಣಕೂಟವಷ್ಟೇ, ಯಾವುದೇ ಗೊಂದಲ ಬೇಡ ಎಂದು ಅನುಮಾನಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ. ಇದನ್ನು ಕೇವಲ 'ಪೊಲಿಟಿಕಲ್ ಬ್ರೇಕ್ ಫಾಸ್ಟ್' ಎಂದು ಕರೆಯುವುದು ಅಥವಾ ಭಾವಿಸುವುದು ಸರಿಯಲ್ಲ. ಈ ಸಭೆಗಳಿಗೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತವಿದೆ ಎಂಬುದು ಸತ್ಯಕ್ಕೆ ದೂರವಾದ ಮಾತಾಗಿದ್ದು, ನಮ್ಮ ನಡುವೆ ಯಾವುದೇ ಭಿನ್ನಮತಗಳಿಲ್ಲ. ಹೊರಗಡೆಯಷ್ಟೇ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದರು. 

ಕೆಲವು ಸಮುದಾಯಗಳ ಶಾಸಕರು ತಮ್ಮ ನಾಯಕರ ಪರ ಧ್ವನಿ ಎತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಈ ಎಲ್ಲ ಬೆಳವಣಿಗೆ ಬಗ್ಗೆ ಅಂತಿಮವಾಗಿ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಕೈಗೊಳ್ಳುತ್ತೆ.  ಅವರ ನಿರ್ಧಾರಕ್ಕೆ ನಾವು ಬದ್ಧ. ಈಗಾಗಲೇ ಸಿಎಂ ಮತ್ತು ಡಿಸಿಎಂ ಅವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ. ಅಲ್ಲಿಗೆ ಎಲ್ಲಾ ಗೊಂದಲಗಳು ಮತ್ತು ಚರ್ಚೆಗಳು ಮುಗಿದಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments