Select Your Language

Notifications

webdunia
webdunia
webdunia
Friday, 11 April 2025
webdunia

`ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಬ್ಯಾನ್’

Tippu jayanti
ಬೆಂಗಳೂರು , ಶುಕ್ರವಾರ, 20 ಅಕ್ಟೋಬರ್ 2017 (21:14 IST)
ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವ ವಿರುದ್ಧ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಸಮರ ಮುಂದುವರಿಸಿದ್ದಾರೆ.

ನನ್ನ ಹೆಸರು ಯಾವುದೇ ಕಾರಣಕ್ಕೂ ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದು ಸರ್ಕಾರದ  ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ನ. 10ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಭಾಗವಾಗಿ ನನ್ನ ಹೆಸರನ್ನು ಉತ್ತರ ಕನ್ನಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಾಗಲಿ, ರಾಜ್ಯದ ಇತರ ಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಮೂದಿಸಬೇಡಿ ಎಂದು ಆಪ್ತ ಸಹಾಯಕ ರಮೇಶ್‌ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷವೂ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅನಂತ್‌ ಕುಮಾರ್‌ ಹೆಗಡೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. 

ಟಿಪ್ಪು ಜಯಂತಿ ಬ್ಯಾನ್‌

ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್‌ ಜೋಷಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಬ್ಯಾನ್‌ ಮಾಡುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು 8 ಮಂದಿ ದಾರುಣ ಸಾವು