Select Your Language

Notifications

webdunia
webdunia
webdunia
webdunia

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

DCM DK Shivkumar

Sampriya

ಬೆಂಗಳೂರು , ಶುಕ್ರವಾರ, 5 ಡಿಸೆಂಬರ್ 2025 (15:43 IST)
Photo Credit X
ಬೆಂಗಳೂರು:  ವಾಚ್‌ ಬಗ್ಗೆ ಪ್ರಶ್ನೆ ಎತ್ತಿದ ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿಗೆ ಮತ್ತೇ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಎಕ್ಸ್ ಖಾತೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಅಫಿಡವಿಟ್ ಕಾಪಿ‌ ಹಾಕಿ ಬಿಜೆಪಿ ನಾಯಕನಿಗೆ ಡಿಕೆಶಿ ಟಾಂಗ್‌ ಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಹಂಚಿಕೊಂಡ ಪೋಸ್ಟ್‌ನಲ್ಲಿ ಇಲ್ಲಿದೆ: 

ಮಿಸ್ಟರ್ ನಾರಾಯಣಸ್ವಾಮಿ.., ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್. ಜವಾಬ್ದಾರಿಯುತ
ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ!

ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಡಿಕೆಶಿ ಟಕ್ಕರ್‌ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ