Publish Date: Sun, 02 Jun 2024 (13:29 IST)
Updated Date: Sun, 02 Jun 2024 (13:38 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಸಾಧಿಸಲಿದೆ. ಎಂದು ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಹುತೇಕ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ 20+ ಸ್ಥಾನ ಗೆಲ್ಲಬಹುದು ಹಾಗೂ ಕಾಂಗ್ರೆಸ್ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಭವಿಷ್ಯ ನುಡಿದಿದೆ.
ಅಲ್ಪಪ್ರಮಾಣದ ಮಾದರಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು.