Webdunia - Bharat's app for daily news and videos

Install App

ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ, ಮನೆಯಲ್ಲಿದ್ದರೆ ವಾಪಾಸ್ ನೀಡಿ: ಆಹಾರ ಸುರಕ್ಷತಾ ಅಧಿಕಾರಿ

Sampriya
ಶನಿವಾರ, 18 ಮೇ 2024 (16:06 IST)
Photo Courtesy X
ಬೆಂಗಳೂರು:  ಭಾರತದ ಪ್ರಸಿದ್ಧ ಎವರೆಸ್ಟ್ ಫಿಶ್ ಕರಿ ಮಸಾಲೆಯ ಆಮದನ್ನು ಸಿಂಗಾಪೂರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಇದೀಗ ಎವರೆಸ್ಟ್ ಚಿಕನ್ ಮಸಾಲಾವನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ. .

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ವರದಿಯಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೈಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಈ ಸಂಬಂಧ ಈಗಾಗಲೇ ಎವರೆಸ್ಟ್ ಮಸಾಲಾ ಕಂಪನಿಗೆ ನೋಟಿಸ್ ನೀಡಿ ಚಿಕನ್ ಮಸಾಲಾ ಪಾಕೆಟ್‌ ಸರಬರಾಜು ನಿಲ್ಲಿಸಬೇಕೆಂದು ಹೇಳಲಾಗಿದೆ. ಅದಲ್ಲದೆ ಅಂಗಡಿಗಳಿಗೆ ಪೊರೈಸಿದ ಮಸಾಲೆಯನ್ನು ವಾಪಸ್ಸು ಪಡೆಯುವಂತೆ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments