ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ರಾಜಕಾರಣಿಯಾಗಿರುವ ಶ್ರೀನಿವಾಸ್ ಪ್ರಸಾದ್ ಅವರು ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ಸಚಿವ ರಮೇಶ್ ಕುಮಾರ್ ಹೇಳಿದರು.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ರಾಜೀನಾಮೆಯಂತಹ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ಅಭಿಪ್ರಾಯಪಟ್ಟರು.
ಮಾಜಿ ಸಚಿವರಾಗಿ ಅವರು ಕರ್ತವ್ಯ ಮರೆಯುವಂತಿಲ್ಲ. ಏನೇ ಭಿನ್ನಾಭಿಪ್ರಾಯಗಳಿದ್ದರು ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ