Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆಯನ್ನು ಮುಂದೂಡದಂತೆ ಆಯೋಗಕ್ಕೆ ಕಾಂಗ್ರೆಸ್ ಮನವಿ

Webdunia
ಶನಿವಾರ, 4 ಜೂನ್ 2016 (18:37 IST)
ರಾಜ್ಯಸಭೆ ಚುನಾವಣೆಯನ್ನು ಮುಂದೂಡದಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ತೆರಳಿ ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ಮತ ನೀಡಲು ನಾಲ್ವರು ಶಾಸಕರು ಕೋಟಿ ಕೋಟಿ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಚುನಾವಣೆಯನ್ನು ಮುಂದೂಡ ಬೇಡಿ ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ತೆರಳಿ ಚುನಾವಣಾಧಿಕಾರಿ ಅನಿಲ್ ಕುಮಾರ ಝಾ ಅವರ ಬಳಿ ಡಾ.ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ.
 
ಚುನಾವಣಾಧಿಕಾರಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾಗಲಿ ಶಾಸಕರಾಗಲಿ ಹಣದ ಆಮಿಷ ಒಡ್ಡಿಲ್ಲ. ಚುನಾವಣೆ ಮುಂದೂಡದಂತೆ ರಾಜ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇನೆ. ಅವರು ನಮ್ಮ ಮನವಿಗೆ ಸ್ಪಂಧಿಸಿದ್ದು, ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
 
ಪೂರ್ವನಿಗದಿಯಂತೆ ಇಂದು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಡಿವೈಎಸ್‌ಪಿ ಅನುಪಮಾ ಶಣೈ ಅವರ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲವೆಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments