Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರಕಾರಕ್ಕೆ ಶೆಟ್ಟರ್ ಸಲಹೆ

ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರಕಾರಕ್ಕೆ ಶೆಟ್ಟರ್ ಸಲಹೆ
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2016 (18:07 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ಸದನದಲ್ಲಿ ಕೈಗೊಂಡಿರುವ ದಿಟ್ಟ ನಿರ್ಧಾರವನ್ನು ಮುಂದುವರೆಸುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.
 
ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಂಡಿರುವ ಒಮ್ಮತದ ನಿರ್ಣಯವನ್ನು ಪಾಲಿಸಿ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದೇನೆ ಎಂದು ಹೇಳಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧವಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆದಾಯ ಘೋಷಣೆ ಯೋಜನೆಯಡಿ 65,250 ಕೋಟಿ ರೂ. ಕಪ್ಪು ಹಣ ಘೋಷಣೆ: ಸಚಿವ ಜೇಟ್ಲಿ