ರಾಜ್ಯ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ತಾರತಕ್ಕೇರಿದ್ದು, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಡಿ ಎಂದು ಶಾಸಕ ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಬಂಡಾಯ ಶಾಸಕ ಚೆಲುವರಾಯ ಸ್ವಾಮಿ, ದಕ್ಷಿಣ ಪದವೀಧರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಟಿ.ಶ್ರೀಕಂಠೇಗೌಡರನ್ನು ಬೆಂಬಲಿಸಬೇಡಿ. ಅವರಿಗೆ ಮತ ನೀಡಬೇಡಿ ಎಂದು ಬಹಿರಂಗವಾಗಿ ಕರೆ ನೀಡಿದ್ದಾರೆ.
ಬಹಿರಂಗವಾಗಿ ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಗರಂ ಆದ ಜೆಡಿಎಸ್ ಕಾರ್ಯಕರ್ತರು ಸುದ್ದಿಗೋಷ್ಠಿಯಲ್ಲೇ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಪರವಾಗಿ ಜೈಕಾರ ಕೂಗಿ, ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಒತ್ತಾಯಿಸಿದರು.
ಪಕ್ಷದ ಕಳಂಕವನ್ನು ತೊಳೆಯಲು ಜೂನ್ 12 ರಂದು ಮಹೂರ್ತ ಫಿಕ್ಸ್ ಆಗಿದೆ. ಕೆಲವರು ಪಕ್ಷದಿಂದ ಚಿಗುರಿ ಪಕ್ಷವನ್ನೇ ಚಿವುಟಲು ಹೊರಟಿದ್ದಾರೆ ಎಂದು ಜೆಡಿಎಸ್ ಸಂಸದ ಪುಟ್ಟರಾಜು ಬಂಡಾಯ ಶಾಸಕರಿಗೆ ಟಾಂಗ್ ನೀಡಿದ್ದರು.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ನನ್ನನ್ನು ಭಸ್ಮಾಸುರರೆನ್ನಲ್ಲಿ ಎನ್ನಾದರು ಅನ್ನಲ್ಲಿ ನಾನು ಎಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದು ಜೆಡಿಎಸ್ ಬಂಡಾಯ ಶಾಸಕ ಚೆಲುವರಾಯ ಸ್ವಾಮಿ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ