Select Your Language

Notifications

webdunia
webdunia
webdunia
webdunia

ಡಬಲ್ ಇಂಜಿನ್ ಸರ್ಕಾರ ಎಂದರೆ ಡಬಲ್ ಅಭಿವೃದ್ಧಿ- ರಾಜೀವ್ ಚಂದ್ರಶೇಖರ್

Double engine government means double Development
bangalore , ಶನಿವಾರ, 29 ಏಪ್ರಿಲ್ 2023 (14:44 IST)
ಡಬಲ್ ಇಂಜಿನ್ ಸರ್ಕಾರವೆಂದರೆ, ಡಬಲ್ ಅಭಿವೃದ್ಧಿ ಮತ್ತು ಅಭಿವೃದ್ಧಿಯ ವೇಗ ಹೆಚ್ಚಿಸುವುದೇ ಆಗಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಎಂಬುದು ಕೇವಲ ಘೋಷಣೆಯಲ್ಲ. ಡಬಲ್ ಇಂಜಿನ್ ಸರ್ಕಾರವೆಂದರೆ ಅಭಿವೃದ್ಧಿಯ ವೇಗ, ಅಭಿವೃದ್ಧಿಯ ಪ್ರಮಾಣವಾಗಿದೆ. ರಾಜ್ಯಗಳ ಸಮನ್ವಯದೊಂದಿಗೆ ಆರ್ಥಿಕತೆ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಸುಧಾರಿಸುವತ್ತ ಕೇಂದ್ರ ಸರ್ಕಾರ ಒತ್ತು ನೀಡುತ್ತಿದೆ.ಕಳೆದ ಮೂರುವರೆ ವರ್ಷದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ನಿಜವಾದ ಅಭಿವೃದ್ಧಿಯಾಗಿದೆ. ವೇಗದ ಅಭಿವೃದ್ಧಿ ಸಾಧ್ಯವಾಗಿದೆ. ಜನಕೇಂದ್ರಿತ- ಜನಪರ ನೀತಿಗಳನ್ನು ಜಾರಿಗೊಳಿಸಲಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ಜನವಿರೋಧಿ ಆಲೋಚನೆಯನ್ನು ಹೊಂದಿದೆ. ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ, ಚತ್ತೀಸ್‍ಗಢದಲ್ಲಿ ಅಭಿವೃದ್ಧಿಯಾಗುತ್ತಿಲ್ಲ...ಕೋವಿಡ್ ಸಾಂಕ್ರಾಮಿಕ ವೇಳೆ ಪ್ರಧಾನಿಯವರು ಆರೋಗ್ಯ ಮತ್ತು ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡಿದ್ದರು. ಭಾರತ ಇಂದು ವಿಶ್ವದಲ್ಲೇ 5ನೇ ಪ್ರಬಲ ಆರ್ಥಿಕ ರಾಷ್ಟ್ರವೆನಿಸಿದೆ. ದೇಶದಲ್ಲಿ ಹಣದುಬ್ಬರ ದರ ಕಡಿಮೆಯಾಗಿದೆ. ಅಧಿಕ ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ ಎಂದು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ