Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಡಬಲ್ ಮರ್ಡರ್

Webdunia
ಮಂಗಳವಾರ, 22 ಫೆಬ್ರವರಿ 2022 (17:23 IST)
ರಾಜ್ಯ ರಾಜಧಾನಿ ಬೆಂಗಳೂರು (Bengaluru) ಭೀಕರ ಜೋಡಿ ಕೊಲೆಗೆ (Double Murder) ಸಾಕ್ಷಿಯಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪಿ ಈ ವೇಳೆ ಅಡ್ಡ ಬಂದ ಅತ್ತೆಯ ಕಥೆಯನ್ನೂ ಮುಗಿಸಿದ್ದಾನೆ.
37 ವರ್ಷದ ಸಾವಿತ್ರಿ (Savithri) ಹಾಗೂ 60 ವರ್ಷ ವಯಸ್ಸಿನ ಸರೋಜಮ್ಮ(Sarojamma) ಮೃತರಾದವರು. ಸಾವಿತ್ರಿಯ ಪತಿ 47 ವರ್ಷದ ರವಿಕುಮಾರ್ (Ravikumar) ಅವರನ್ನು ಈಗಾಗಲೇ ಬಂಧನ ಮಾಡಲಾಗಿದೆ ಎಂದು ಗೋವಿಂದರಾಜನಗರ ಪೊಲೀಸರು ತಿಳಿಸಿದ್ದಾರೆ. ತೀರ್ಥಹಳ್ಳಿ ಮೂಲದ ದಂಪತಿಗಳು ಕಳೆದ 18 ವರ್ಷದ ಹಿಂದೆ ವಿವಾಹವಾಗಿದ್ದರು. ಆರು ತಿಂಗಳ ಹಿಂದೆಯಷ್ಟೇ ಮೂಡಲಪಾಳ್ಯಕ್ಕೆ ಬಂದು ಇಲ್ಲಿ ವಾಸವಾಗಿದ್ದರು. ಈ ಹಿಂದೆ ಎಳನೀರು ವ್ಯಾಪಾರ ಮಾಡುತ್ತದ್ದ ಆರೋಪಿ ರವಿಕುಮಾರ್, ಮೂಡಲಪಾಳ್ಯಕ್ಕೆ ಬಂದ ಬಳಿಕ ಬೇಕರಿಯೊಂದನ್ನು ಆರಂಭಿಸಿ ಅದರ ವ್ಯವಹಾರದಲ್ಲಿ ನಿರತರಾಗಿದ್ದರು.
 
ಹೆಂಡತಿಯ ಅನೈತಿಕ ಸಂಬಂಧ ಪ್ರಶ್ನಿಸಿ ಪ್ರತಿ ಬಾರಿ ರವಿಕುಮಾರ್ ಗಲಾಟೆ ಮಾಡುತ್ತಿದ್ದರು. ಇಷ್ಟಾದ್ರೂ ಕೂಡ ಹಳೆ ಚಾಳಿಯನ್ನ ಬಿಡಲು ಪತ್ನಿ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಿದ್ದ ರವಿಕುಮಾರ್ ಕೊಲೆ ಮಾಡಲು ಮುಂದಾಗಿದ್ದರು. ಮಕ್ಕಳನ್ನ ಕಾಲೇಜಿಗೆ ಬಿಟ್ಟು ವಾಪಸ್ ಮನೆಗೆ ಬಂದಿದ್ದ ರವಿ, ಬರುತ್ತಿದ್ದಂತೆ ಎಳನೀರು ಕತ್ತರಿಸುವ ಮಚ್ಚಿನಿಂದ ಸಾವಿತ್ರಿಯನ್ನು ಕೊಲೆ ಮಾಡಿದ್ದಾರೆ. ಈ ವೇಳೆ ಅಡ್ಡ ಬಂದಿದ್ದ ಅತ್ತೆ ಸರೋಜಮ್ಮನನ್ನು ಕೊಲೆ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸರ ವಿಚಾರಣೆ ವೇಳೆ ರವಿಕುಮಾರ್ ಇದೆಲ್ಲವನ್ನು ಬಾಯ್ಬಿಟ್ಟಿದ್ದಾನೆ. ಸಾವಿತ್ರಿಗೆ ಸರೋಜಮ್ಮ ಕೂಡ ಸಹಾಯ ಮಾಡುತ್ತಿದ್ದರು. ಈ ಕಾರಣದಿಂದ ಅತ್ತೆಯನ್ನೂ ಕೊಲೆ ಮಾಡಿದ್ದಾಗಿ ಆರೋಪಿ ರವಿಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನಸ್ಸಿನ ಇಚ್ಛೇ ಆದಷ್ಟು ಭೇಗ ಫಲಿಸಲಿ: ಪುತ್ತಿಗೆ ಸ್ವಾಮೀಜಿ ಆಶೀರ್ವಾದ

90 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ಮುಂದಿನ ಸುದ್ದಿ
Show comments