ಆಯುಧಪೂಜೆಯ ಶುಭದಿನದಂದು ಋತ್ವಿಜರ ವೇದಮಂತ್ರ ಘೋಷಣೆ ನಡೆದ ಬಾಗಿನ ಸಮರ್ಪಣೆ ವಿಧಿವಿಧಾನಗಳಲ್ಲಿ ಸ್ಥಳೀಯ ಜನರು ಪಾಲ್ಗೊಂಡ ಸಚಿವರು, ಸಾಂಪ್ರದಾಯಿಕ ಶ್ರದ್ಧೆಯಿಂದ ಬಾಗಿನದ ಮೊರವನ್ನು ಗಂಗೆಯ ಒಡಲಿಗೆ ಸಮರ್ಪಿಸಿದರು.
ಕ್ಷಣಗಳಲ್ಲಿ ಸ್ಯಾಂಕಿ ಕೆರೆಯ ಪರಿಸರದಲ್ಲಿ ಸಂಭ್ರಮ ಮನೆಮಾಡಿತ್ತು. ಬೆಂಗಳೂರಿನ ಪರಿಸರ ಸ್ವಾಸ್ಥ್ಯವನ್ನು ಕಾಪಾಡುತ್ತಿರುವ ಪ್ರಮುಖ ತಾಣಗಳಲ್ಲಿ ಒಂದಾಗಿರುವ ಈ ಕೆರೆಯು ಹೋದ ವರ್ಷವೂ ಭರ್ತಿಯಾಗಿತ್ತು ಈಗ ಈ ಕೆರೆಗೆ ನೀರು ಹರಿದು ಬರುವ ಕಡೆಗಳಲ್ಲೆಲ್ಲ ವೈಜ್ಞಾನಿಕ ಪದ್ಧತಿಯನ್ನು ಅನುಸರಿಸುತ್ತಿದೆ, ಶುದ್ಧವಾದ ನೀರು ಮಾತ್ರ ಕೆರೆಯ ಒಡಲನ್ನು ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಇದು ಉಪಯುಕ್ತವಾದ ಕ್ರಮವಾಗಿದೆ, '' ಎಂದು.