ಮೋದಿಯವರ ತಂಡಕ್ಕೆ ಡಾ ಸಿಎನ್ ಮಂಜುನಾಥ್ ಸೇರಿಕೊಳ್ಳಲಿದ್ದಾರೆ: ಡಾ ಸಿಎನ್ ಅಶ್ವತ್ಥನಾರಾಯಣ್

Krishnaveni K
ಮಂಗಳವಾರ, 16 ಏಪ್ರಿಲ್ 2024 (17:00 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ್ ಅವರು ಗೆದ್ದು ನರೇಂದ್ರ ಮೋದಿಯವರ ತಂಡ ಸೇರಲಿದ್ದಾರೆ. ಈ ಭಾಗದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

 
ರಾಮನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಡವರು, ಮಹಿಳೆಯರು, ಯುವಜನತೆ, ರೈತರ ಪರವಾಗಿ 4 ಪ್ರಮುಖ ಶಕ್ತಿಗಳನ್ನು ವಿಂಗಡಣೆ ಮಾಡಿದ್ದಾರೆ. ರೈತರ ಪರವಾಗಿ ಕಿಸಾನ್ ಸಮ್ಮಾನ್ ಮುಂದುವರಿಸುವಿಕೆ ಜೊತೆಗೆ ಬೆಂಬಲ ಬೆಲೆ ಕಾಲಕಾಲಕ್ಕೆ ಕೊಡುವುದಲ್ಲದೆ, ಅದನ್ನು ಹೆಚ್ಚಿಸಲು ಮೋದಿಜೀ ಅವರು ಸಂಕಲ್ಪ ಮಾಡಿದ್ದಾರೆ ಎಂದು ವಿವರಿಸಿದರು.

 
ಉಪಗ್ರಹ ಬಳಸಿ ಬೆಳೆಗಳ ಮಾಹಿತಿ ಸಂಗ್ರಹಿಸಿ ನೀಡುವುದು, ಹವಾಮಾನದ ಮುನ್ಸೂಚನೆ ನೀಡಲಿದ್ದಾರೆ. ಕೃಷಿ ಮೂಲಸೌಕರ್ಯಕ್ಕೆ ಒತ್ತು ಕೊಡಲು ಸರಕಾರ ಮುಂದಾಗಲಿದೆ ಎಂದು ತಿಳಿಸಿದರು. ವ್ಯವಸಾಯದಲ್ಲಿ ದೊಡ್ಡ ಕ್ರಾಂತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 
ಮಹಿಳಾ ಸಬಲೀಕರಣ ಮಾಡಲು ಎಲ್ಲ ಸೌಕರ್ಯಗಳನ್ನು ನೀಡಲಾಗುವುದು. 3 ಕೋಟಿ ಮಹಿಳೆಯರನ್ನು ಲಕ್ಷಪತಿ ಮಾಡಲು ಸರಕಾರ ಮುಂದಾಗಿದೆ. 4 ಕೋಟಿ ಮನೆಗಳ ನಿರ್ಮಾಣ ಆಗಲಿದೆ. ಶೌಚಾಲಯ, ನೀರು ಮತ್ತಿತರ ಮೂಲಭೂತ ಸೌಲಭ್ಯ ಕೊಡಲಾಗುವುದು ಎಂದು ತಿಳಿಸಿದರು.

 
ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲಾಗುವುದು. ಮಹಿಳಾ ಮೀಸಲಾತಿಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಪಡಿತರ ವಿಸ್ತರಣೆ ಸೇರಿದಂತೆ ಬಡವರಿಗೆ ಬೇಕಾದ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಂಕಲ್ಪ ಪತ್ರವು ಬದ್ಧತೆಯನ್ನು ತೋರಿದೆ ಎಂದು ಹೇಳಿದರು.

 
ಅಟಲ್ ಪಿಂಚಣಿ, ಆರೋಗ್ಯ ವಿಮೆ ಮೊದಲಾದವುಗಳನ್ನು ಇನ್ನಷ್ಟು ವಿಸ್ತರಿಸಲು ಮುಂದಾಗಿದೆ. ಯುವಕರು ನಮ್ಮ ಆಶಾಕಿರಣ. ಅವರಿಗೆ ಹೆಚ್ಚಿನ ಒತ್ತು ಕೊಡಲು ತಂತ್ರಜ್ಞಾನ, ಕೌಶಲ್ಯಕ್ಕೆ ಒತ್ತು ಕೊಡಲಾಗುವುದು ಎಂದು ತಿಳಿಸಿದರು. ಮುದ್ರಾ ಯೋಜನೆಯಡಿ ಇನ್ನಷ್ಟು ಜನರಿಗೆ ಪ್ರಯೋಜನ ಸಿಗಲಿದೆ ಎಂದು ಹೇಳಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ಕೊಡಲಾಗುವುದು ಎಂದರು. ಈಗಾಗಲೇ 7 ಕೋಟಿ ಉದ್ಯೋಗ ಸೃಷ್ಟಿ ಆಗಿದೆ ಎಂದು ವಿವರ ನೀಡಿದರು. ಮನೆಬಾಗಿಲಿಗೆ ಸರಕಾರದ ಎಲ್ಲ ಸೇವೆಗಳು ದೊರಕಲಿವೆ ಎಂದು ಹೇಳಿದರು.

 
ಇದೇವೇಳೆ ಅವರು ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments