Publish Date: Mon, 27 Mar 2023 (13:42 IST)
Updated Date: Mon, 27 Mar 2023 (14:12 IST)
ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆಗೆ ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಚತಾ ವಿಭಾಗದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ 15 ಪೌರಕಾರ್ಮಿಕರಿಗೆ ಅಭಿನಂದಿಸಿ ಸನ್ಮಾನಿಸಲಾಯಿತು.ಈ ವೇಳೆ ವಿಶೇಷ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಡಾ. ಆರ್.ಎಲ್ ದೀಪಕ್, ಶ್ರೀ ಪಿ.ಎನ್. ರವೀಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.