Select Your Language

Notifications

webdunia
webdunia
webdunia
webdunia

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

Dr CN AshwathNarayan
ಬೆಂಗಳೂರು: ರಾಜ್ಯದ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.
 
ಮಲ್ಲೇಶ್ವರದ ಎಸ್.ಎಚ್.ವಿ.ಎನ್.ಎಂ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಯುವೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಇಂತಹ ಮೇಳಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ  ಹಲವಾರು ಸಂಸ್ಥೆಗಳು ಕೈ ಜೋಡಿಸಿವೆ ಎಂದು ಹೇಳಿದರು.
 
ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ಸದೃಢ ಸಮಾಜ ಕಟ್ಟಲು ಸಾಧ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿ ಆಗಿದೆ. ಬಸವೇಶ್ವರರ ಜಯಂತಿ ದಿನವೇ ಈ ಮೇಳ ಆಯೋಜಿಸಲಾಗಿದೆ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದರು. ಅವರು ಹೇಳಿದಂತೆ ಸಮಾನತೆಯ ಸಮಾಜ ಕಟ್ಟಲು ಬದ್ಧರಾಗೋಣ ಎಂದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ