ಧರ್ಮಸ್ಥಳ: ಇತ್ತೀಚೆಗೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರಗಳಾದಾಗ ಪುರಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ ಎಂದು ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಜೈನ ಮುನಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರು ಯಾವ ರೀತಿಯ ಹೋರಾಟಕ್ಕೂ ಸಿದ್ಧರಾಗಿದ್ದರು ಎಂದಿದ್ದಾರೆ.
ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ಭಕ್ತರೊಬ್ಬರು ಹೇಳುತ್ತಿದ್ದರು, ಈ ಘಟನೆ ಆದಾಗನಿಂದಿ ಪುರಷರಿಗಿಂತ ಹೆಚ್ಚು ಮಹಿಳಾ ಭಕ್ತರೇ ಕಣ್ಣೀರು ಹಾಕಿದ್ದಾರೆ. ನಮಗೆ ನಮ್ಮ ಕುಟುಂಬಕ್ಕೆ ನೆಮ್ಮದಿಯಿಲ್ಲ. ನೀವೇ ಏನಾದ್ರೂ ಮಾಡಿ ಎಂದಿದ್ದರು. ಕೆಲವು ಹೆಣ್ಣು ಮಕ್ಕಳು ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದಿದ್ದರು. ಆದರೆ ಹೋರಾಟದ ಅಗತ್ಯವಿಲ್ಲ. ಎಲ್ಲವನ್ನೂ ಸ್ವಾಮಿ ನೋಡಿಕೊಳ್ಳುತ್ತೇನೆ ಎಂದು ಧರ್ಮಾದಿಕಾರಿಗಳು ಹೇಳಿದ್ದಾರೆ.