ಸಿದ್ದು ವಿರುದ್ದ ಡಾ.ಕೆ.ಸುಧಾಕರ್ ಕಿಡಿ

Webdunia
ಶುಕ್ರವಾರ, 19 ಮೇ 2023 (14:28 IST)
ಸಮ್ಮಿಶ್ರ ಸರ್ಕಾರದ ಪತನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments