Publish Date: Tue, 03 Mar 2020 (20:52 IST)
Updated Date: Tue, 03 Mar 2020 (20:55 IST)
ಬಸ್ ನಿಲ್ದಾಣಕ್ಕೆ ಲಿಂ.ಡಾ.ಪುಟ್ಟರಾಜ ಕವಿ ಗವಾಯಿಗಳ ಹೆಸರು ಇಡಬೇಕೆಂದು ಜನರು ಒತ್ತಾಯಿಸುತ್ತಿದ್ದು, ಅದಕ್ಕೆ ಸರಕಾರ ಹೀಗೆ ಹೇಳ್ತಿದೆ.
ನವೀಕರಣಗೊಳ್ಳುತ್ತಿರುವ ಗದಗ ಹಳೆ ಬಸ್ ನಿಲ್ದಾಣಕ್ಕೆ ಡಾ. ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕೆಂದು ಸಾರ್ವಜನಿಕರ ಸಂಘ -ಸಂಸ್ಥೆಗಳ ಬೇಡಿಕೆ ಹಾಗೂ ಒತ್ತಾಯ ಹೆಚ್ಚಾಗುತ್ತಿದೆ. ಈ ಬೇಡಿಕೆಯು ನ್ಯಾಯೋಚಿತವಾಗಿದೆ. ನಿಯಮಾನುಸಾರ ಈ ಕುರಿತು ಅಗತ್ಯ ಕ್ರಮ ಕೈಕೊಳ್ಳಲು ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಅವರು ವಾಯವ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಗದಗ ನಗರದ ಹಳೆ ಬಸ್ ನಿಲ್ದಾಣದ ಬಳಿ ವಿವಿಧ ಸ೦ಘ-ಸ೦ಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಗದಗ ನಗರದ ಹಳೆ ಬಸ್ ನಿಲ್ದಾಣಕ್ಕೆ ಲಿ೦. ಡಾ ಪುಟ್ಟರಾಜ ಕವಿ ಗವಾಯಿಗಳವರ ಹೆಸರನ್ನು ಇಡಬೇಕೆ೦ದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಇದಕ್ಕೆ ಪೂರಕವಾಗಿ ಸಚಿವ ಲಕ್ಷ್ಮಣ ಸವದಿ ಪತ್ರ ಬರೆದು ಸೂಚನೆ ನೀಡಿರೋದು ಗವಾಯಿಗಳ ಭಕ್ತರಲ್ಲಿ ಹರ್ಷಕ್ಕೆ ಕಾರಣವಾಗಿದೆ.