Webdunia - Bharat's app for daily news and videos

Install App

ಡಾ.ಪುಟ್ಟರಾಜ ಕವಿ ಗವಾಯಿಗಳ ಹೆಸರು ಬಸ್ ನಿಲ್ದಾಣಕ್ಕೆ ; ಸರಕಾರ ಹೇಳಿದ್ದೇನು?

Webdunia
ಮಂಗಳವಾರ, 3 ಮಾರ್ಚ್ 2020 (20:52 IST)
ಬಸ್ ನಿಲ್ದಾಣಕ್ಕೆ ಲಿಂ.ಡಾ.ಪುಟ್ಟರಾಜ ಕವಿ ಗವಾಯಿಗಳ ಹೆಸರು ಇಡಬೇಕೆಂದು ಜನರು ಒತ್ತಾಯಿಸುತ್ತಿದ್ದು, ಅದಕ್ಕೆ ಸರಕಾರ ಹೀಗೆ ಹೇಳ್ತಿದೆ.

ನವೀಕರಣಗೊಳ್ಳುತ್ತಿರುವ ಗದಗ ಹಳೆ ಬಸ್ ನಿಲ್ದಾಣಕ್ಕೆ ಡಾ. ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕೆಂದು ಸಾರ್ವಜನಿಕರ ಸಂಘ -ಸಂಸ್ಥೆಗಳ ಬೇಡಿಕೆ ಹಾಗೂ ಒತ್ತಾಯ ಹೆಚ್ಚಾಗುತ್ತಿದೆ. ಈ ಬೇಡಿಕೆಯು ನ್ಯಾಯೋಚಿತವಾಗಿದೆ. ನಿಯಮಾನುಸಾರ ಈ ಕುರಿತು ಅಗತ್ಯ ಕ್ರಮ ಕೈಕೊಳ್ಳಲು  ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಅವರು ವಾಯವ್ಯ ಸಾರಿಗೆ  ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಗದಗ ನಗರದ ಹಳೆ ಬಸ್ ನಿಲ್ದಾಣದ ಬಳಿ ವಿವಿಧ ಸ೦ಘ-ಸ೦ಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಗದಗ ನಗರದ ಹಳೆ ಬಸ್ ನಿಲ್ದಾಣಕ್ಕೆ ಲಿ೦. ಡಾ ಪುಟ್ಟರಾಜ ಕವಿ ಗವಾಯಿಗಳವರ ಹೆಸರನ್ನು ಇಡಬೇಕೆ೦ದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಇದಕ್ಕೆ ಪೂರಕವಾಗಿ ಸಚಿವ ಲಕ್ಷ್ಮಣ ಸವದಿ ಪತ್ರ ಬರೆದು ಸೂಚನೆ ನೀಡಿರೋದು ಗವಾಯಿಗಳ ಭಕ್ತರಲ್ಲಿ ಹರ್ಷಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments