Publish Date: Thu, 20 Feb 2020 (18:33 IST)
Updated Date: Thu, 20 Feb 2020 (18:35 IST)
ನೂತನ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಡಾ. ಎನ್. ವಿ. ಪ್ರಸಾದ್.
ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ ಅವರು ಕಲಬುರಗಿ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಎನ್. ವಿ. ಪ್ರಸಾದ್ ಅವರನ್ನು ಭೇಟಿಯಾಗಿ ಹೂಗುಚ್ಚ ನೀಡಿ ಶುಭ ಕೋರಿದರು.
ಜಿ.ಪಂ. ಅಧ್ಯಕ್ಷರಾದ ಸುವರ್ಣ ಹಣಮಂತ ಮಲಾಜಿ ಅವರು ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ, ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯಿತಿಗೆ ಕೆ.ಕೆ.ಆರ್.ಡಿ.ಬಿ. ಅನುದಾನ ನೀಡಬೇಕೆಂದು ಮನವಿ ಮಾಡಿದರು.