ಕೊರೊನಾ ವೈರಸ್ ನಿಂದ ಕುಡುಕರಿಗೆ ಸಿಗೋದಿಲ್ಲ ಮದ್ಯ

Webdunia
ಗುರುವಾರ, 19 ಮಾರ್ಚ್ 2020 (18:45 IST)
ಕೊರೊನಾ ಎಫೆಕ್ಟ್ ನಿಂದಾಗಿ ಮದ್ಯ ಪ್ರಿಯರಿಗೆ ಬಿಗ್ ಶಾಕ್ ಬಿದ್ದಂತಾಗಿದೆ.  

 ಬೀದರ ಜಿಲ್ಲೆಯಲ್ಲಿ ಕೋವಿಡ್-19 ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗೃತ ಕ್ರಮ ಜರುಗಿಸುವ ನಿಟ್ಟಿನಲ್ಲಿ, ಪಾನಿಕರು ಗುಂಪು ಗುಂಪಾಗಿ ಸೇರುವ ಸ್ಥಳಗಳಾದ ಸಿಎಲ್-4, ಸಿಎಲ್-7, ಸಿಎಲ್-9  ಮತ್ತು ಸಿಎಲ್-14 ವಿವಿಧ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಂತ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ ಬೀದರ ಜಿಲ್ಲೆಯಾದ್ಯಂತ 18-03-2020ರ ಮಧ್ಯರಾತ್ರಿಯಿಂದ 26-03-2020ರ ಬೆಳಗ್ಗೆ 6 ಗಂಟೆವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments